ಪ್ರತಿ
ಭಾನುವಾರ ನಾವು ಯೂನಿವರ್ಸಿಟಿ ಗ್ರೌಂಡ್ ನಲ್ಲಿ ಕ್ರಿಕೆಟ್ ಆಡಲು ಹೋಗುತ್ತಿದ್ದೆವು. ನಮ್ಮದು
ಕಾಲೇಜು ಹುಡುಗರ ಟೀಮು. ಅದಕ್ಕೆ ನಾನು ಮುಖಂಡ. ಇನ್ನೊಂದು ವಾರಾಂತ್ಯ ಕಳೆಯಲು ಬರುತ್ತಿದ್ದ
ಸಾಫ್ಟ್ ವೇರ್ ಇಂಜಿನಿಯರುಗಳ ಟೀಮು. ಅದರ ಮುಖಂಡ ಐಬಿಎಂ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಒಬ್ಬ
ಆಜಾನುಬಾಹು. ಅವನ ಹೆಸರು ಕಾರ್ತಿಕ್. ನನಗೂ ಅವನಿಗೂ ಯಾವಾಗಲೂ ಎಣ್ಣೆ ಸೀಗೇಕಾಯಿ. ಒಮ್ಮೊಮ್ಮೆ
ಕೈಕೈ ಮಿಲಾಯಿಸುವವರೆಗೂ ಕಿತ್ತಾಡುತ್ತಿದ್ದೆವು. ಅವರು ಸೀನಿಯರ್ ಎಂಬುದನ್ನೂ ಮರೆತು ಬಾಯಿಗೆ ಬಂದ
ಹಾಗೆ ಬಯ್ಯುತ್ತಿದ್ದೆವು. ಒಟ್ಟಾರೆ ಅವರು ಪಾಕಿಸ್ತಾನ ನಾವು ಇಂಡಿಯಾ ಅನ್ನೋ ತರಹ
ಆಡುತ್ತಿದ್ದೆವು.
ಕಾರ್ತಿಕ್
ಓಡಿ ಬಂದವನೇ ನನ್ನನ್ನು ಎತ್ತಿ ತನ್ನ ತೊಡೆ ಮೇಲೆ ಮಲಗಿಸಿ ಮುಖಕ್ಕೆ ನೀರು ಹಾಕಿ ಗಾಳಿ ಬೀಸಿದ.
ತನ್ನ ಕರ್ಚೀಪ್ ನಿಂದ ತರುಚಿದ ಗಾಯದಿಂದ ಒಸರುತ್ತಿದ್ದ ರಕ್ತವನ್ನು ಒರೆಸಿದ. ನಾನು ಕಣ್ಣು
ಬಿಡುತ್ತಿದ್ದಂತೆ ನಾನು ಕಾರ್ತಿಕ್ ನ ತೊಡೆ ಮೇಲೆ ಮಲಗಿದ್ದೆ. ಎಲ್ಲಾ ವಿಷಯ ನಿಧಾನವಾಗಿ
ತಿಳಿಯಿತು. ಎಲ್ಲರಿಗೂ ಮಂಕು ಕವಿದಂತಾಗಿ ಆಟವನ್ನು ನಿಲ್ಲಿಸಿ ಎಲ್ಲರೂ ಹೊರಟರು. ಕಾರ್ತಿಕ್ ಏನೂ
ಆಗಿಲ್ಲ. ರೆಸ್ಟ್ ತಗೊ ಎಂದು ಹೇಳಿ ನನ್ನ ಬೆನ್ನು ನೇವರಿಸಿದ. ಸ್ನೇಹಿತ ಗಾಡಿಯಲ್ಲಿ ಮನೆವರೆಗೂ
ಬಿಟ್ಟು ಹೋದ. ನಾನು ಮನೆಗೆ ಬಂದವನೇ ಅಮ್ಮನಲ್ಲಿ ಎಲ್ಲಾ ವಿಷಯವನ್ನು ಹೇಳಿದೆ. ಯಾವ ತಾಯಿ ಹೆತ್ತ
ಮಗನೋ ಅವನ ಹೊಟ್ಟೆ ತಣ್ಣಗಿರಲಿ ಎಂದು ಅಮ್ಮ ಹರಸಿದಳು. ನನ್ನನು ಡಾಕ್ಟರಲ್ಲಿ ಕರಕೊಂಡುಹೋದಳು.
*****
No comments:
Post a Comment